Breaking News
Home / ರಾಜ್ಯ / ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು

ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು

Spread the love

ಮುಂಬೈ: ಕೆಲವೊಮ್ಮೆ ಸಣ್ಣ ಪುಟ್ಟ ಕಾರಣಗಳಿಗೂ ಕೊಲೆಗಳು ನಡೆಯುತ್ತದೆ. ಕೇವಲ 20 ರೂ ವಿಚಾರಕ್ಕೆ ವ್ಯಕ್ತಿಯ ಕೊಲೆಯಾಗುತ್ತದೆ ಎಂದರೆ ನಂಬುವುದು ಕಷ್ಟ. ಆದರೆ ಇಂತಹ ಘಟನೆ ನಡೆದಿದ್ದು ಮಹಾರಾಷ್ಟ್ರದ ಥಾಣೆಯಲ್ಲಿ.

ಥಾಣೆಯಲ್ಲಿ ತಳ್ಳು ಗಾಡಿ ವ್ಯಾಪಾರಿಯೊಬ್ಬನನ್ನು ಕೊಲೆ ಮಾಡಲಾಗಿದೆ. 26 ವರ್ಷದ ವೀರೇಂದ್ರ ಯಾದವ್ ಎಂಬಾತನೇ ಕೊಲೆಯಾದ ಯುವಕ.

ವೀರೆಂದ್ರ ಯಾದವ್ ಇಲ್ಲಿನ ಮೀರಾ ರಸ್ತೆಯಲ್ಲಿ​ ತಳ್ಳುಗಾಡಿಯಲ್ಲಿ ಇಡ್ಲಿ ಉಪಹಾರದ ವ್ಯಾಪಾರ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಆತನ ಗಾಡಿಯ ಬಳಿ ಮೂವರು ತಿಂಡಿ ತಿನ್ನಲೆಂದು ಬಂದಿದ್ದರು. ಆಗ ಅವರಿಗೆ ‘ನೀವು ನನಗೆ 20 ರೂಪಾಯಿ ಬಾಕಿ ಕೊಡುವುದಿದೆ’ ಎಂದು ವೀರೇಂದ್ರ ನೆನಪಿಸಿದ್ದಾನೆ. ಇದೇ ಕಾರಣಕ್ಕೆ ಜಗಳ ಆರಂಭವಾಗಿದೆ.

ಮಾತುಕತೆ ಹೆಚ್ಚಾಗಿ ಕೈಕೈ ಮಿಲಾಯಿಸಲಾಗಿದೆ. ಈ ವೇಳೆ ಒಬ್ಬಾತ ವಿರೇಂದ್ರ ಯಾದವ್ ನನ್ನು ತಳ್ಳಿದ್ದಾನೆ. ಆ ರಭಸಕ್ಕೆ ಕಲ್ಲಿನ ಮೇಲೆ ಬಿದ್ದ ವೀರೆಂದ್ರ ನ ತಲೆಗೆ ಗಾಯವಾಗಿತ್ತು. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆತರುವ ವ್ಯವಸ್ಥೆ ಮಾಡಿದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಮೂವರು ವ್ಯಕ್ತಿಗಳ ವಿರುದ್ಧ ನಯಾ ನಗರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಡವರಿಗಲ್ಲ, ರೈಸ್ ಮಿಲ್‍ಗಳಿಗೆ ಸೇರುತ್ತಿದೆ ‘ಅನ್ನಭಾಗ್ಯ’ ಅಕ್ಕಿ

Spread the loveಕೋಲಾರ: ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ