Breaking News
Home / Uncategorized / “ಕೊರೋನಾ ಸೋಂಕಿತರ ಮನೆ ಎದುರು ಎಚ್ಚರಿಕೆ ಫಲಕ ಹಾಕುವ ಪರಿಪಾಠ ಕೈಬಿಡಿ” : H.D.K.

“ಕೊರೋನಾ ಸೋಂಕಿತರ ಮನೆ ಎದುರು ಎಚ್ಚರಿಕೆ ಫಲಕ ಹಾಕುವ ಪರಿಪಾಠ ಕೈಬಿಡಿ” : H.D.K.

Spread the love

ಜು.19-ಕೋವಿಡ್-19ರ ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌.

ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.

ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ.

ಆರೋಗ್ಯದ ಈ ತುರ್ತು ಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು ಎಂಸಿಐಗೆ. ಸರ್ಕಾರಕಲ್ಲ ನೆನಪಿರಲಿ ಎಂದಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌.

ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ಅವರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ