Breaking News

ತಲೆ ಕತ್ತರಿಸಿ ವ್ಯಕ್ತಿಯೊಬ್ಬನ ಭೀಕರ ಹತ್ಯೆ..!

Spread the love

ಚಿಕ್ಕಬಳ್ಳಾಪುರ,ಫೆ.7- ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿ ಶಿರ ಕಡಿದು ಹತ್ಯೆ ಮಾಡಿರುವ ಘಟನೆ ಗುಂಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡಿಬಂಡೆ ತಾಲ್ಲೂಕಿನ ಬೋಗೇನಹಳ್ಳಿ ಗ್ರಾಮದ ನರಸಿಂಹಪ್ಪ(47) ಕೊಲೆಯಾದ ವ್ಯಕ್ತಿ.ಮೃತ ನರಸಿಂಹಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಬೋಗೇನಹಳ್ಳಿಯಿಂದ ವರದಯ್ಯಗಾರಹಳ್ಳಿಗೆ ತೆರಳುತ್ತಿದ್ದಾಗ ಅಪರಿಚಿತರು ಹಿಂಬದಿಯಿಂದ ಬಂದು ಮಚ್ಚಿನಿಂದ ಶಿರ ಕಡಿದು ಕೊಲೆ ಮಾಡಿದ್ದಾರೆ.

ಹಾಡುಹಗಲೇ ಈ ಕೃತ್ಯ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಕೊಲೆಗೆ ಕಾರಣವೇನೆಂಬುದು ಕೂಡ ತಿಳಿದುಬಂದಿಲ್ಲ.ನರಸಿಂಹಪ್ಪ ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ರ್ಪಸಿ ಪರಾಭವಗೊಂಡಿದ್ದರು ಎನ್ನಲಾಗಿದ್ದು, ಕೊಲೆಗೆ ಹಳೇ ದ್ವೇಷವೇ ಕಾರಣ ಇರಬಹುದೆಂದು ಶಂಕೆ ವ್ಯಕ್ತವಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಜಿ.ಕೆ.ಮಿಥುನ್ ಕುಮಾರ್, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡಿಬಂಡೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ

Spread the loveಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ