Breaking News

ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ: ‘ಟ್ರ್ಯಾಕ್ಟರ್ ಕ್ರಾಂತಿ’ಗೆ ಕರೆ ನೀಡಿದ ರಾಕೇಶ್ ಟಿಕಾಯತ್

Spread the love

ಗಾಜಿಯಾಬಾದ್: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬಂದರೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

ಗಾಜಿಪುರ ಗಡಿಯಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ನಾವು ಸರ್ಕಾರದೊಂದಿಗೆ ಮತ್ತೆ ಚರ್ಚೆ ನಡೆಸಲು ಸಿದ್ಧರಿದ್ದೇವೆ. ಆದರೆ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳು ಅಮಾನತು ಮಾಡುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಒಪ್ಪಿಗೆ ಇಲ್ಲ. ಅದನ್ನು ನಾವು ಒಪ್ಪುವುದೂ ಇಲ್ಲ. ಹೀಗಾಗಿ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ ಎಂದು ಹೇಳಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ರೈತರು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ರೈತರು ಹುತಾತ್ಮರಾಗಿದ್ದಾರೆ.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ