Breaking News
Home / ರಾಜ್ಯ / ‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

Spread the love

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.

ಅಂತ್ಯೋದಯ ಅನ್ನ ಯೋಜನೆಯ 29,353 ಪಡಿತರ ಚೀಟಿಗಳಿಗೆ ಮತ್ತು ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ 2,35,356 ಬಿಪಿಎಲ್ ಪಡಿತರ ಚೀಟಿಗಳ 8,49,922 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ ಚೀಟಿಗಳಿಗೆ 2 ಕೆ.ಜಿ. ಗೋಧಿ ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿದೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ತಿಳಿಸಿದ್ದಾರೆ.

ಫೆಬ್ರವರಿ ತಿಂಗಳ ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ ಆದ್ಯತೇತರ ಪಡಿತರ ಚೀಟಿ ಹೊಂದಿದವರಿಗೆ ಏಕ ಸದಸ್ಯರಿಗೆ ಅಕ್ಕಿ 5 ಕೆಜಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ. ರಂತೆ ನೀಡಿ ಆಹಾರ ಧಾನ್ಯವನ್ನು ಪಡೆಯಬಹುದಾಗಿದೆ.

ಜಿಲ್ಲೆಯ ಆಯ್ದ 399 ನ್ಯಾಯಬೆಲೆ ಅಂಗಡಿಗಳಲ್ಲಿ ಬಿ.ಪಿ.ಎಲ್. ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಓ.ಟಿ.ಪಿ. ಮುಖಾಂತರ ಅಥವಾ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಕುಟುಂಬದ ಸದಸ್ಯರಿಗೆ ಲಭ್ಯವಾಗಿರುವ ಅರ್ಹತಾ ಪ್ರಮಾಣವನ್ನು ತಿಳಿದುಕೊಂಡು ಅಕ್ಕಿಯನ್ನು ಪಡೆದುಕೊಳ್ಳಲು ಸೂಚಿಸಿದೆ.

ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ತಹಸೀಲ್ದಾರು ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಲು ಕೋರಿದೆ.

ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿಂದ ಆಹಾರಧಾನ್ಯವನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ