Breaking News

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!

Spread the love

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ ಖರ್ಚನ್ನು ರಾಜ್ಯ ಸರ್ಕಾರವೇ ಕೊಡಲಿದ್ದು, ಏಪ್ರಿಲ್ ನಂತರದಲ್ಲಿ ರಾಜ್ಯದ ಅಕ್ಕಿಯನ್ನು ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ ನಿಂದ ಪಡಿತರ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತಿದ್ದು, ಅನರ್ಹ ಪಡಿತರ ಚೀಟಿ ರದ್ದುಪಡಿಸಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ