Breaking News

ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Spread the love

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ www.ssp.postmetric.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿದೆ.

ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರಕಾರಿ ಆದೇಶಗಳ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್‍ಗೆ, ಇಲಾಖಾ ಇ-ಮೇಲ್ [email protected] ರಾಜ್ಯ ವಿದ್ಯಾರ್ಥಿವೇತನದ ತಂತ್ರಾಂಶದ ಸಹಾಯವಾಣಿ-080-35254757, ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದ ಇ-ಮೇಲ್ ಐಡಿ [email protected] ಹಾಗೂ ಇಲಾಖಾ ಸಹಾಯವಾಣಿ: 8050770004, 8050770005, 0836-2447961 ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ

Spread the loveಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ