Home / ರಾಜ್ಯ / ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ: ನಿರಾಣಿ

ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ: ನಿರಾಣಿ

Spread the love

ಬೆಂಗಳೂರು: ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂಥ ‘ಏಕಗವಾಕ್ಷಿ’ ಪದ್ಧತಿ ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮುಂದಾಗಿದ್ದಾರೆ.

ಆ ಮೂಲಕ, ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಿದ್ದಾರೆ.

ಇಲಾಖೆಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಭೆ ನಡೆಸಿದ ಸಚಿವರು, ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

‘ಅನೇಕ ವರ್ಷಗಳಿಂದ ಅನುಮೋದನೆಗಾಗಿ ಕಾಯುತ್ತಿರುವ ಪ್ರಸ್ತಾವನೆಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ಉದ್ದಿಮೆದಾರರ ಮನೆ ಬಾಗಿಲಿಗೆ ನಾವೇ ಹೋಗಬೇಕೆಂಬುದು ನಮ್ಮ ಗುರಿಯಾಗಿದೆ’ ಎಂದು ಸಚಿವರು ಹೇಳಿದರು.

‘ಏಕಗವಾಕ್ಷಿ ಪದ್ಧತಿ ಜಾರಿ ಮಾಡಿದರೆ, ಉದ್ದಿಮೆದಾರರು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಾರೆ. ಇಲಾಖೆಯಿಂದ ಇಲಾಖೆಗೆ ಪರವಾನಗಿ ಪಡೆಯಲು ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಣೆ ಮಾಡಬೇಕಾದರೆ ಈ ಪದ್ಧತಿ ಜಾರಿ ಮಾಡುವುದೇ ಏಕೈಕ ಪರಿಹಾರ’ ಎಂದು ಸಚಿವರು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ