ಚಲಿಸುತ್ತಿದ್ದ ರೈಲು ಹತ್ತುವಾಗ ಜಾರಿ ಬಿದ್ದ ವಿಕಲಚೇತನನ್ನು ಸಮಯಪ್ರಜ್ಞೆ ತೋರಿದ ರೈಲ್ವೆ ಸುರಕ್ಷತಾ ಪಡೆ (ಆರ್ ಪಿಎಫ್) ಸಿಬ್ಬಂದಿ ರಕ್ಷಿಸಿದ ಘಟನೆ ಮಹಾರಾಷ್ಟ್ರದ ಪನ್ವಾಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಫೆಬ್ರವರಿ 5ರಂದು ಈ ಘಟನೆ ನಡೆದಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.
ವಿಕಲಚೇತನ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ್ದಾರೆ. ಈ ವೇಳೆ ದಿಢೀರನೆ ರೈಲಿನ ವೇಗ ಹೆಚ್ಚಳಗೊಂಡಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದಿದ್ದು, ರೈಲಿನಡಿ ಸಿಲುಕುವ ಆಪಾಯಕ್ಕೆ ಸಿಲುಕಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ರೈಲ್ವೆ ಸಿಬ್ಬಂದಿ ಕೂಡಲೇ ಸಮಯಪ್ರಜ್ಞೆ ಮೆರೆದು ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಚಲಿಸುತ್ತಿದ್ದ ರೈಲನ್ನು ಹತ್ತುವ ಪ್ರಯತ್ನ ಮಾಡಬೇಡಿ. ದಯವಿಟ್ಟು ಮಾರ್ಗಸೂಚಿಗಳನ್ನು ಅನುಸರಿಸಿ ಜೀವ ರಕ್ಷಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
पनवेल, मुंबई में RPF सुरक्षा कर्मी की सतर्कता, और त्वरित एक्शन से एक दिव्यांग यात्री को ट्रेन की चपेट में आने से बचाया गया।
इस प्रकार चलती ट्रेन में चढ़ने का प्रयास, आपके लिये घातक सिद्ध हो सकता है। आपका जीवन अमूल्य है, मेरा आग्रह है कि नियमों का पालन करें, व सुरक्षित रहें। pic.twitter.com/dKZsL7Ph8e
— Piyush Goyal (@PiyushGoyal) February 6, 2021
Laxmi News 24×7