ಬೆಂಗಳೂರು- ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ ‘ಏಕಗವಾಕ್ಷಿ ‘ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರೇಶ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.ಆ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ದತಿಯನ್ನು ಜಾರಿ ಮಾಡಲು ಮುಂದಾಗಿದ್ದಾರೆ.
ಈ ಸಂಬಂಧ ಇತ್ತೀಚಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಭೆ ನಡೆಸಿದ ಸಚಿವರು, ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.’ನಮ್ಮ ಸರ್ಕಾರ ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸಲು ಬಯಸಿದೆ. ಅನೇಕ ವರ್ಷಗಳಿಂದ ಅನುಮೋದನೆಗಾಗಿ ಕಾಯುತ್ತಿರುವ ಪ್ರಸ್ತಾವನೆಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ಉದ್ದಿಮೆದಾರರ ಮನೆ ಬಾಗಿಲಿಗೆ ನಾವೇ ಹೋಗಬೇಕೆಂಬುದು ನಮ್ಮ ಗುರಿಯಾಗಿದೆ’ ಎಂದು ಹೇಳಿದರು.