Breaking News

ವಿದೇಶಿ ವಿನಾಶಕಾರಿ ಸಿದ್ಧಾಂತ, ಆಂದೋಲನ ಜೀವಿಗಳಿಂದ ದೇಶ ರಕ್ಷಿಸಬೇಕಿದೆ: ಮೋದಿ

Spread the love

ನವದೆಹಲಿ: ವಿವಾದಿತ ಕೃಷಿ ಕಾನೂನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ಮಾತನಾಡಿದ್ದು ‘ವಿದೇಶಿ ವಿನಾಶಕಾರಿ ಸಿದ್ಧಾಂತ’ (ಎಫ್‌ಡಿಐ) ಆಂದೋಲನ ಜೀವಿಗಳಿಂದ ನಾವು ದೇಶವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು ದೇಶದ ಹೊಸ ತಲೆಮಾರಿನ ಜನರನ್ನು ವಿದೇಶಿ ವಿನಾಶಕಾರಿ ಸಿದ್ಧಾಂತಗಳಿಂದ ರಕ್ಷಿಸಿಬೇಕಿದ್ದು, ಅವರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಪ್ರತಿಭಟನೆಯ ಹೆಸರಿನಲ್ಲಿ ಹೊಸ ತಲೆಮಾರಿನ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಹಾಗೂ ದೇಶದ ಪ್ರಗತಿಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಮೋದಿ ಹೇಳಿದರು.

ದೇಶದಲ್ಲಿ ಹೊಸ ತಳಿಯ ಪ್ರತಿಭಟನಾಕಾರರು ಮತ್ತು ಚಳವಳಿಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಎಚ್ಚರದಿಂದಿರಬೇಕು.ಈಗ ದೇಶದಲ್ಲಿ ಹೊಸ ಎಫ್‌ಡಿಐ (ವಿದೇಶಿ ವಿನಾಶಕಾರಿ ಐಡಿಯಾಲಜಿ) ಹುಟ್ಟಿಕೊಂಡಿದೆ. ಆ ಸಿದ್ಧಾಂತದಿಂದ ದೇಶವನ್ನು ರಕ್ಷಿಸಬೇಕಾಗಿದೆ. ಈ ಬಗ್ಗೆ ನಾವು ಹೆಚ್ಚು ಜಾಗೃತರಾಗಿರಬೇಕು ಎಂದು ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ