Breaking News
Home / ರಾಜ್ಯ / ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ.: ಸುರೇಶ್‍ಕುಮಾರ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ.: ಸುರೇಶ್‍ಕುಮಾರ್

Spread the love

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ..ಶಿಕ್ಷಣ ಸಚಿವ ಸುರೇಶ್‍ಕುಮಾರ್

ಯಾವುದೇ ಶಾಲೆ ಆಗಿರಬಹುದು. ಬೆಂಗಳೂರಿನ ಕೇಂದ್ರೀಯ ಶಾಲೆಯಿಂದ ಹಿಡಿದು ಕೊನೆಯ ಶಾಲೆವರೆಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಇದು ಈ ನೆಲದ ಕಾನೂನಾಗಿದೆ. ಅದಕ್ಕೋಸ್ಕರ ಕಾಯ್ದೆ ಕೂಡ ಜಾರಿಗೆ ತರಲಾಗಿದೆ.

ಕನ್ನಡ ಕಲಿಸಲು ಸಮರ್ಪಕವಾದ ಶಿಕ್ಷಕರನ್ನು ತುಂಬಿಸಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಭರವಸೆ ನೀಡಿದರು.
ಗಡಿ ಭಾಗದ ಮರಾಠಿ, ಉರ್ದು ಶಾಲೆಯಲ್ಲಿ ಕನ್ನಡ ಶಿಕ್ಷಕರ ಕೊರತೆ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾನಾಪುರದಲ್ಲಿ ಉತ್ತರಿಸಿದ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಎಲ್ಲಾ ಕಡೆ ವರದಿ ತೆಗೆದುಕೊಂಡಿದ್ದೇವೆ.

ಕೇವಲ ಗಡಿ ಭಾಗ ಅಷ್ಟೇ ಅಲ್ಲ, ಎಲ್ಲಾ ಕಡೆ ಶಿಕ್ಷಕರ ಕೊರತೆಯಿದೆ. ಕೆಲವು ಕಡೆ ಶಿಕ್ಷಕರ ಸಂಖ್ಯೆ ಹೆಚ್ಚಿದೆ. ನಗರ ಪ್ರದೇಶಗಳಲ್ಲಿ ಹೆಚ್ಚಿದೆ. ಗಡಿ ಪ್ರದೇಶದ ಶಾಲೆಗಳಿಗೆ ಬರಲು ಸ್ವಲ್ಪ ಹಿಂಜರಿತವಿದೆ. ಹೀಗಾಗಿ ಈ ಸಂಬಂಧ ಶಿಕ್ಷಕರ ಕೊರತೆ ನೀಗಿಸಲು ವರದಿ ತರಿಸಿಕೊಂಡು, ಯಾವ್ಯಾವ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆಯೋ ಅಲ್ಲಿ ಶಿಕ್ಷಕರನ್ನು ನೇಮಿಸಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Spread the love ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ