Breaking News
Home / Uncategorized / ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ : ಡಿಸಿಎಂ ಲಕ್ಷ್ಮಣ ಸವದಿ

ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ : ಡಿಸಿಎಂ ಲಕ್ಷ್ಮಣ ಸವದಿ

Spread the love

ಬೆಂಗಳೂರು,ಫೆ.9-ಸಾರಿಗೆ ನೌಕರರ ವೇತನ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಅವರ ವೇತನದಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ. ನಾಳೆ ಬಸ್ ಸಂಚಾರದಲ್ಲಿಯೂ ವ್ಯತ್ಯಯವಾಗುವುದಿಲ್ಲ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ಸ್ಪಷ್ಟಪಡಿಸಿದ್ದಾರೆ.ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಷ್ಟದಿಂದ ವೇತನದಲ್ಲಿ ಕೊಂಚ ಏರುಪೇರಾಗಿತ್ತು. ಈಗ ಸಾರಿಗೆ ನೌಕರರ ವೇತನವನ್ನು ನೀಡಲಾಗುವುದು. ಡಿಸೆಂಬರ್‍ನಲ್ಲಿ ನೌಕರರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು.

ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಪರಮಾರ್ಶೆ ಮಾಡುತ್ತಿದೆ. ಕೆಲವು ಕಾರ್ಯಸಾಧು ಬೇಡಿಕೆಗಳನ್ನು ಈಡೇರಿಸಿದೆ. ಉಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಿದೆ ಎಂದರು.

ನಾಳಿನ ಪ್ರತಿಭಟನೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಬಿಎಂಟಿಸಿ ಕೇಂದ್ರ ಕಚೇರಿ ಎದುರು ನೌಕರರು ಸಾಂಕೇತಿಕವಾಗಿ ಧರಣಿ ಮಾಡುತ್ತಾರೆ ಎಂಬುದು ಗೊತ್ತಾಗಿದೆ. ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ