Breaking News

ನಾವು ಸದಾ ಜಾಗೃತರಾಗಿ, ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ‌ ಭವಿಷ್ಯ ಉಜ್ವಲವಾಗಲಿದೆ: ರಮೇಶ್ ಜಾರಕಿಹೊಳಿ‌

Spread the love

ಹರಿಹರ: ಸಮಾಜದಲ್ಲಿ ಜಾಗೃತಿ ನಿರ್ಮಾಣ ಮತ್ತು ಸಬಲ ಸಂಘಟನೆಯ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ನ್ಯಾಯಸಮ್ಮತವಾಗಿ ಸವಲತ್ತುಗಳನ್ನು ಪಡೆಯಲು ಸಂಘಟನಾ ಶಕ್ತಿ ಪ್ರದರ್ಶಿಸಬೇಕಾದ ಸಂದರ್ಭ ಇದಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ನಾಯಕ ಜನಾಂಗದ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಆರ್ಥಿಕ, ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯುವ ದಿಸೆಯಲ್ಲಿ ಸಾಂಘಿಕ ಶಕ್ತಿ ಪ್ರದರ್ಶಿಸಬೇಕಾಗಿದೆ ಎಂದರು.

ಅಂಬೇಡ್ಕರ್ ಅವರು ಹೇಳಿದಂತೆ ಜಾಗೃತಿ ಮತ್ತು ಸಂಘಟನೆ, ಎರಡೂ ಸಮುದಾಯವನ್ನು ಉನ್ನತ ಮಟ್ಟಕ್ಕೇರಿಸುತ್ತದೆ. ನಮ್ಮ ನಾಯಕ‌ ಜನಾಂಗಕ್ಕೆ ತನ್ನದೇ ಆದ ಇತಿಹಾಸವಿದೆ. ನಮ್ಮ ವಿಭಿನ್ನ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸಲಾಗುತ್ತಿದೆ. ಸಮಾವೇಶಗಳ ಮೂಲಕ ಜನಜಾಗೃತಿ ಉಂಟುಮಾಡಲಾಗುತ್ತಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಪಾಳೇಗಾರರಾಗಿ, ರಾಜರಾಗಿ ಅಧಿಕಾರದಲ್ಲಿ ಧೀಮಂತರೆನಿಸಿಕೊಂಡ ಅನೇಕ‌ ಸಾಹಸಿಗಳು ನಮ್ಮ ಜನಾಂಗದವರಾಗಿದ್ದಾರೆ. ನಮ್ಮ ಜನಾಂಗ ಶೌರ್ಯ ಮತ್ತು ಸಾಹಸಗಳಿಗೆ ಹೆಸರುವಾಸಿಯಾಗಿದೆ. ನಮ್ಮ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಪ್ರೋತ್ಸಾಹ ನೀಡುತ್ತಾ ನಮ್ಮ ಗುರುಪೀಠ ಮತ್ತು ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ನಮಗೆಲ್ಲಾ ಮಾರ್ಗದರ್ಶನ ಮಾಡುತ್ತಿದ್ದಾರೆ. ಈ ಹಿಂದಿನ ಗುರುಗಳಾದ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸ್ಥಾಪಿಸಲಾದ ಈ‌ ಮಠ, ಇಂದು ನಾಡಿನ‌ ಪ್ರಮುಖ‌ ಮಠವಾಗಿ ಬೆಳೆದಿದೆ. ನಮ್ಮ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರೀ ಮಠ ಶ್ರಮಿಸುತ್ತಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಕರ್ನಾಟಕದಲ್ಲಿ ಕೊಡಗಿನಿಂದ ಕೋಲಾರದವರೆಗೆ, ಚಾಮರಾಜನಗರದಿಂದ ಬೀದರ್ ವರೆಗೆ ನಮ್ಮ ಸಮಾಜ ಬೇರೂರಿದೆ. ಸಾಂಘಿಕ ಹೋರಾಟದಿಂದ ಸಮಾಜದಲ್ಲಿ ಜಾಗೃತಿ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯದ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಸಮುದಾಯ ನಿರ್ಣಾಯಕವಾಗಿದೆ. ಹಾಗಾಗಿಯೇ ಜನಜಾಗೃತಿ ಸಮಾವೇಶದ ಮೂಲಕ ನಮಗೆ ನ್ಯಾಯಸಮ್ಮತವಾಗಿ ದೊರಕಬೇಕಾದ ಸವಲತ್ತುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ‌ಸೆಳೆದಿದ್ದೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಗಂಡುಗಲಿ ಕುಮಾರರಾಮ, ಕಂಪಿಲರಾಯ, ಎಚ್ಚಮನಾಯಕ, ಮದಕರಿ ನಾಯಕ, ಹಕ್ಕ – ಬುಕ್ಕ, ವೀರ ಸಿಂಧೂರ ಲಕ್ಷ್ಮಣನಂಥಹಾ ಧೀಮಂತರ ಸಮುದಾಯದ ಪ್ರತಿನಿಧಿಗಳಾಗಿರುವ ನಾವು ಸದಾ ಜಾಗೃತರಾಗಿ, ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ‌ ಭವಿಷ್ಯ ಉಜ್ವಲವಾಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ