ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ 2-3 ಸುತ್ತಿನ ಸಭೆ ನಡೆದಿದೆ. ಪಕ್ಷದವರು ಮೂವರ ಹೆಸರನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಪಕ್ಷ ಹೇಳಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಇನ್ನು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಉಪಸಮಿತಿ ರಚನೆಯಾಗಿದೆ. ಉಪಸಮಿತಿ ಸಭೆ ಸೇರಿ ಸರ್ಕಾರಕ್ಕೆ ವರದಿ ಕೊಡಬೇಕು. ವರದಿ ನೀಡದೇ ಮೀಸಲಾತಿ ನೀಡಲಾಗಲ್ಲ. ಹಾಗಾಗಿ ವಾಲ್ಮೀಕಿ ಸಮಾವೇಶದಲ್ಲಿ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ ಎಂದು ಹೇಳಿದರು.
Laxmi News 24×7