Home / ಜಿಲ್ಲೆ / ಬೆಂಗಳೂರು / ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!

ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!

Spread the love

ಬೆಂಗಳೂರು, ಫೆ.10- ವಿಧಾನ ಮಂಡಲ ಅವೇಶನದ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅದಕ್ಕೂ ಮೊದಲು ಸದೃಢ ಆರೋಗ್ಯಕ್ಕಾಗಿ 10 ದಿನಗಳ ಕಾಲ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಇಂದು ಸಂಜೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ನಡೆಸಲಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಅನಂತರ ಫೆ.25ರಿಂದ 10 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ತಂಗಲಿದ್ದಾರೆ. ಬಳಿಕ ಬಜೆಟ್ ಅವೇಶನದ ಮುಗಿದ ಮೇಲೆ ರಾಜ್ಯಾದ್ಯಂತ ಪ್ರವಾಸ ಹೊರಡಲಿದ್ದಾರೆ.ಕಳೆದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಯಲ್ಲಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 10 ದಿನ ಉಳಿದುಕೊಂಡಿದ್ದ ಸಿದ್ದರಾಮಯ್ಯ ಅವರು, ಅಲ್ಲಿಗೆ ತಮ್ಮನ್ನು ನೋಡಲು ಬಂದಿದ್ದ ಆಪ್ತರ ಜೊತೆ ಮಾತನಾಡುವಾಗ ಕುಮಾರಸ್ವಾಮಿ ಸರ್ಕಾರ ಶೀಘ್ರವೇ ಪತನಾಗಲಿದೆ ಎಂದು ಭವಿಷ್ಯ ಹೇಳಿದ್ದರು. ಅವರು ಹೇಳಿದಂತೆ ಕ್ಷೀಪ್ರ ರಾಜಕೀಯ ಬೆಳವಣಿಗಳು ನಡೆದು ಸಮ್ಮಿಶ್ರ ಸರ್ಕಾರ ಪತನವಾಯಿತು.


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ