Breaking News

ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಡಿ.ಕೆ ಸುರೇಶ್

Spread the love

ರಾಮನಗರ: ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಸುರೇಶ್ ಅವರು ಆದರ್ಶ ಮೆರೆದಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

 

ಇತ್ತೀಚೆಗೆ ಕೊರೊನಾ ಸೋಂಕಿತರನ್ನು ಸಮಾಜ ಕೀಳಾಗಿ ನೋಡುತ್ತಿರುವ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಜತೆ ಮಾತನಾಡಿ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಿದ್ದ ಸುರೇಶ್ ಅವರು, ಈಗ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯ ಸಂಸ್ಕಾರ ಆಗುವಂತೆ ನೋಡಿಕೊಂಡಿದ್ದಾರೆ.

ಈ ವಿಚಾರವಾಗಿ ಇತ್ತೀಚೆಗಷ್ಟೇ ಬಹಿರಂಗ ಪತ್ರ ಬರೆದಿದ್ದ ಸುರೇಶ್ ಅವರು, ‘ಕೊರೊನಾ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಈ ವಿಷಯದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿದ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮ ಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕು’ ಎಂದು ಮನವಿ ಮಾಡಿದ್ದರು.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ