Breaking News

ಫೆ.23ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ

Spread the love

ಬೆಂಗಳೂರು(ಫೆ.10): ಖಾಸಗಿ ಶಿಕ್ಷಣ ಸಂಸ್ಥೆಗಳ ಹೋರಾಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.  ಮತ್ತೆ  ಸರ್ಕಾರದ ವಿರುದ್ಧ ತೊಡೆ ತಟ್ಟಲು ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಶುಲ್ಕ ಕಡಿತ ವಿಚಾರದಲ್ಲಿ ಸ್ಪೋಟ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟಗಳು ಕಿಡಿಕಾರಿವೆ. ಶುಲ್ಕ ಕಡಿತ ಪುನರ್ ಪರಿಶೀಲನೆ ಮಾಡಿ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ.  ಕ್ಯಾಮ್ಸ್, ಮಿಕ್ಸಾ, ಮಾಸ್ , ಕುಸಮ, ಸಿಬಿಎಸ್ ಇ ಹಾಗೂ ಐಸಿಎಸ್ಸಿ ಇ ಒಕ್ಕೂಟಗಳು ಪ್ರತಿಭಟನೆಗೆ ನಿರ್ಧರಿಸಿವೆ. ಹೀಗಾಗಿ ಇದೇ ಫೆ. 23 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆ ನೀಡಿವೆ. 1.ರಾಜ್ಯ ಸರ್ಕಾರ ಆದೇಶ ಮಾಡಿರುವ ಶೇ. 30 ರಷ್ಟು ಶುಲ್ಕ ಕಡಿತದ ಆದೇಶವನ್ನ ಪುನರ್ ಪರಿಶೀಲನೆ‌ ಮಾಡಬೇಕು. ರಾಜ್ಯ ಸರ್ಕಾರ ಶೇ 30 ರಷ್ಟು ಕಡಿತ ಎಂದು ಹೇಳಿದೆ. ಆದರೆ ಆದೇಶದಲ್ಲಿ ಶೇ. 55 ರಿಂದ 65 ರಷ್ಟು ಶುಲ್ಕ ಕಡಿತವಾಗುತ್ತಿದೆ.

2. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಬೇಕು.

3. ಕಟ್ಟಡ ಸುರಕ್ಷಿತ ಪ್ರಮಾಣ ಪತ್ರ ಹಿಂದಿನ ಶಾಲೆಗಳಿಗೆ ಕೈ ಬಿಡುವಂತೆ ಒತ್ತಾಯ.

4. 1 ರಿಂದ 5 ನೇ ತರಗತಿಗಳನ್ನ ಆರಂಭ ಮಾಡಬೇಕು

5. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಇನ್ನೂ ವಿವಿಧ ಬೇಡಿಕೆಗಳನ್ನು ಇದೇ ಫೆ. 23ರೊಳಗೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಒಂದು ವೇಳೆ ಸರ್ಕಾರ ಈ ಮೇಲ್ಕಂಡ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇದೇ ಫೆ.23ರಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ.

ಖಾಸಗಿ ಶಾಲೆಗಳ ಉಳಿವಿಗೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕೈ ಜೋಡಿಸಿದ್ದಾರೆ. ಸುರೇಶ್​ ಕುಮಾರ್ ಕೋವಿಡ್ ಸಮಯದಲ್ಲಿ‌ ಶಿಕ್ಷಕರಿಗೆ ಕೊಟ್ಟ ಕೊಡುಗೆ ಏನು..? ಯಾವ ರೀತಿಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸಹಾಯ ಮಾಡಿದ್ದೀರಾ? ನಿಮ್ಮಗೆ ಆತ್ಮಸಾಕ್ಷಿ ಇದ್ದರೆ 20 ಜನರಿಗೆ ಕೆಲಸ ಕೊಟ್ಟು ಸಂಬಳ ಕೊಡಿ ನೋಡೋಣ. ಕೊರೋನಾ ಸಂಕಷ್ಟ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಯಾವ ರೀತಿ ಸಹಾಯ ಮಾಡಿದ್ದೀರಾ? ಪೋಷಕರನ್ನ ಎತ್ತಿಕಟ್ಟುವ ಕೆಲಸ ಮಾಡ್ತಿರಾ? ಇಂತಹ ಎಡಬಿಡಂಗಿ ವ್ಯಕ್ತಿಯನ್ನ ನೋಡಿಲ್ಲ. ಒಂದು ಕೈಗಾರಿಕೆಗೆ ಎಷ್ಟೆಲ್ಲಾ ಅನುಕೂಲ ಮಾಡಿಕೊಡ್ತೀರಾ? ಅದೇ ರೀತಿ ಶಿಕ್ಷಣ ಸಂಸ್ಥೆಗೇನಾದ್ರೂ‌ ನೀಡಿದ್ದೀರಾ? ನಾನು ಈ ಪಕ್ಷಕ್ಕೆ ಹೊಸದಾಗಿ ಬಂದಿದ್ದೇನೆ. ಚುನಾವಣೆ ಇತ್ತು ಸುಮ್ಮನೆ‌ ಇದ್ದೆ. ಫೆ. 23ರ ಬೃಹತ್ ಹೋರಾಟಕ್ಕೆ ನಾನು ಬರುತ್ತೇನೆ. ಅದಕ್ಕೂ ಸರ್ಕಾರ ನಮ್ಮ ಬೇಡಿಕೆ ಈಡೇರಲಿಲ್ಲ ಅಂದರೆ, ಸುರೇಶ್ ಕುಮಾರ್ ಕಚೇರಿಗೆ ಬೀಗ ಹಾಕಿ ಹೋರಾಟ ಮಾಡುತ್ತೇವೆ ಎಂದು ಪುಟ್ಟಣ್ಣ ಗುಡಗಿದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ