ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಹೆಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಜೊತೆಗಿನ ಆತ್ಮೀಯತೆಯಿಂದ ದೂರಾಗಿದ್ದರು. ಆದ್ರೇ ಇಂದು ದಿಢೀರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಇಂತಹ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು.
ಮೈಸೂರು ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿ ಗುರ್ತಿಸಿಕೊಂಡಿದ್ದವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ.ಮಹದೇವಪ್ಪ. ಆದ್ರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಮಹದೇವಪ್ಪ ಅವರು ಸಿದ್ದರಾಮಯ್ಯ ಅವರಿಂದ ದೂರಾಗಿದ್ದರು. ಇಂತಹ ಹೆಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ತೆರಳಿದಂತ ಸಿದ್ದರಾಮಯ್ಯ ಅವರು, ಸುದೀರ್ಘ ಸಮಾಲೋಚನೆ ನಡೆಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಯಾರೇ ಮೀಸಲಾತಿ ಕೇಳಿದ್ರೂ ನಾನು ವಿರೋಧ ಮಾಡಲ್ಲ. ಯಾರೇ ಬೇಕಾದರೂ ಮೀಸಲಾತಿಗಾಗಿ ಹೋರಾಟ ಮಾಡಬಹುದು ಎಂದು ಹೇಳುವ ಮೂಲಕ ಕುರುಬರ ಮೀಸಲಾತಿಗೆ ಬೆಂಬಲ ವ್ಯಕ್ತ ಪಡಿಸಿದರು.
ಈ ಬಳಿಕ ಮಾತನಾಡಿದಂತ ಮಾಜಿ ಸಚಿವ ಎಚ್ ಸಿ ಮಹಾದೇವಪ್ಪ, ನನ್ನ ಸಿದ್ದರಾಮಯ್ಯ ನಡುವಿನ ಭಾಂಧವ್ಯ ಹೇಗಿತ್ತೋ ಹಾಗೇ ಇದೆ. ಸಂವಿಧಾನದ ಆಶಯಕ್ಕೆ ಧಕ್ಕೆಯಾದಾಗ ಸದಾ ಹೋರಾಟ ಮಾಡ್ತಾ ಬಂದಿದ್ದೇವೆ. ಬರೀ ಅಧಿಕಾರ ಮಾಡ್ತಾ ಇದ್ದವರಲ್ಲ. ನನಗೆ ಆರೋಗ್ಯ ಸಮಸ್ಯೆ ಆಗಿದ್ದರಿಂದ ಕೆಲವು ಕಾಲ ಮನೆಯಿಂದ ಹೊರಗೆ ಬಂದಿಲ್ಲ ಎಂದು ಹೇಳಿದರು.
Laxmi News 24×7