Breaking News
Home / ಸಿನೆಮಾ / ನಾಯಕ ನಟನಾಗಿ ಮಿಂಚಲು ಮುಂದಾದ ‘ಪುರುಷೋತ್ತಮ’ ಜಿಮ್ ರವಿ

ನಾಯಕ ನಟನಾಗಿ ಮಿಂಚಲು ಮುಂದಾದ ‘ಪುರುಷೋತ್ತಮ’ ಜಿಮ್ ರವಿ

Spread the love

ಬೆಂಗಳೂರು, ಫೆ.10- ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಾಡಿಬಿಲ್ಡರ್ ಜಿಮ್ ರವಿ ಅವರು ಈಗ ನಾಯಕನಟರಾಗಿ ಮಿಂಚಲು ಮುಂದಾಗಿದ್ದಾರೆ. ಈಗಾಗಲೇ ಜಿಮ್ ರವಿ ಅವರು ರಾಜ್ಯ, ರಾಷ್ಟ್ರ ಅಷ್ಟೇ ಏಕೆ ಅಂತ ರಾಷ್ಟ್ರಮಟ್ಟದಲ್ಲೂ ಬಾಡಿ ಬಿಲ್ಡಿಂಗ್‍ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ, ಕಿರುತೆರೆ, ಹಿರಿತೆರೆಯಲ್ಲೂ ನಟಿಸಿದ್ದಾರೆ. ಕಳೆದ ಬಾರಿ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಅವರು ಮಿಂಚಿದ್ದರು. ಇದೀಗ ಚಲನಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆಲ್ಲಲು ಸಿದ್ಧರಾಗಿದ್ದಾರೆ.

ರವಿ ಅವರು ಕಳೆದ ಎರಡೂವರೆ ದಶಕಗಳಿಂದ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ 130ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.ಇದೀಗ ಅವರು ಪುರುಷೋತ್ತಮ ಎಂಬ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದಲ್ಲದೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.


Spread the love

About Laxminews 24x7

Check Also

ಶಿವಣ್ಣ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ

Spread the love ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ