Breaking News
Home / Uncategorized / ಪಿಯುಸಿ ತರಗತಿ ದಾಖಲಾತಿ ಅವಧಿ ವಿಸ್ತರಣೆ

ಪಿಯುಸಿ ತರಗತಿ ದಾಖಲಾತಿ ಅವಧಿ ವಿಸ್ತರಣೆ

Spread the love

ಬೆಂಗಳೂರು, ಫೆ.10- ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆಗೆ ಫೆಬ್ರವರಿ 20ರ ವರೆಗೂ ಕಾಲಾವಕಾಶ ನೀಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಪದವಿ ಪೂರ್ವ ಕಾಲೇಜುಗಳ ದಾಖಲಾತಿ ದಿನಾಂಕವನ್ನು ವಿಸ್ತರಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ದಾಖಲಾತಿ ಹಾಗೂ ಕಾಲೇಜು ಬದಲಾವಣೆಗೆ ಫೆಬ್ರವರಿ 20ರ ವರೆಗೂ ಕಾಲಾವಕಾಶ ನೀಡಿ ವಿಸ್ತರಣೆ ಮಾಡಿದೆ.ದಾಖಲಾತಿ ಶುಲ್ಕವನ್ನು ಪಡೆದ ಮಾರನೆ ದಿನ ಖಜಾನೆಗೆ ಕಡ್ಡಾಯವಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ಪ್ರಾಂಶುಪಾಲರು ತಮ್ಮ ಕಾಲೇಜು ಸೂಚನಾ ಫಲಕದಲ್ಲಿ ಈ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸಿ ವಿದ್ಯಾರ್ಥಿಗಳ ಗಮನಕ್ಕೆ ಸೂಕ್ತ ವಿಧಾನದಿಂದ ತಿಳಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ.

Spread the love ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ