ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬೋಳಂತೂರು ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅದರೊಂದಿಗೆ ವಿಷಯ ಎಲ್ಲಾದರೂ ಬಾಯ್ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತಾದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಅಬೂಬಕ್ಕರ್ ಸಿದ್ದಿಕಿ ಹಾಗೂ ಚಪ್ಪಿ ಎಂಬುವರ ವಿರುದ್ಧ ದೂರು ದಾಖಲಿಸಲಾಗಿದೆ.
Laxmi News 24×7