Breaking News

ಎಲ್‌ಐಸಿ ಐಪಿಒದೊಡ್ಡ ಸಂಚಲನಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆ

Spread the love

ನವದೆಹಲಿ, ಫೆಬ್ರವರಿ 10: ಎಲ್‌ಐಸಿ ಐಪಿಒ ಈಗಾಗಲೇ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಏಕೆಂದರೆ ಇದುವರೆಗಿನ ಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಇದರ ಜೊತೆಗೆ ಎಲ್‌ಐಸಿ ಐಪಿಒಗಿಂತ ಮುಂಚೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ವಿಮಾ ಪಾಲಿಸಿಗಳನ್ನು ಹೊಂದಿರುವವರಿಗೆ ಗುಡ್‌ನ್ಯೂಸ್ ಇಲ್ಲಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಎಲ್‌ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್‌ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ.

ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂ ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಹಣಕಾಸು ಮಸೂದೆ 2021-22ರಲ್ಲಿ ಎಲ್‌ಐಸಿಯ ಜೀವ ವಿಮಾ ಪಾಲಿಸಿದಾರರಿಗೆ ಐಪಿಒದಲ್ಲಿ ಶೇಕಡಾ 10ರವರೆಗೆ ಮೀಸಲಿಡುವ ಪ್ರಸ್ತಾಪ ಇದೆ. ಏಪ್ರಿಲ್ 1 ರಿಂದ ಆರಂಭವಾಗುವ ಮುಂದಿನ ಹಣಕಾಸು ವರ್ಷದಲ್ಲಿ ಎಲ್‌ಐಸಿ ಐಪಿಒ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ತಿಳಿಸಿದ್ದರು.


Spread the love

About Laxminews 24x7

Check Also

ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

Spread the love ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ ಯಮಕಮರಡಿ: ನೇಕಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ