Breaking News

ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ: ಸಿದ್ದರಾಮಯ್ಯಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು: ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುವ ವಿಚಾರ ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ ಎಂದು ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸಮಾವೇಶವನ್ನು ಅವರು ಪಕ್ಷಾತೀತವಾಗಿ ಮಾಡುತ್ತಿದ್ದಾರೆ. ಪಕ್ಷದಿಂದ ಮಾಡುತ್ತಿದ್ದೇವೆ ಎಂದು ಅವರು ಹೇಳಲಿ. ಆಗ ಗೊತ್ತಾಗುತ್ತೆ ಕಾಂಗ್ರೆಸ್ ಅಹಿಂದಕ್ಕೆ ಸೇರಿರೋದು ಅಂತ ಎಂದು ಸವಾಲು ಹಾಕಿದರು.

ಇನ್ನು ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ವಿಚಾರಕ್ಕೆ ಗಡುವು ನೀಡಿದ ಕುರಿತು ಮಾತನಾಡಿದ ಅವರು, ಸ್ವಾಮೀಜಿ ಗಡುವು ನೀಡಿರಬಹುದು. ಎಲ್ಲವನ್ನೂ ಸಿಎಂ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಾರೆ ಎಂದರು.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ