Breaking News

BREAKING : ಡಿಕೆ ಶಿವಕುಮಾರ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ, ಕಾಂಗ್ರೆಸ್ ಸೇರ್ಪಡೆ ಖಚಿತ.?

Spread the love

ಬೆಂಗಳೂರು : ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಮುಂದಾಗಿರುವಂತ ಮಧು ಬಂಗಾರಪ್ಪ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗೋದು ಖಚಿತ ಎಂಬಂತೆ ಆಗಿದೆ.

 

ಈಗಾಗಲೇ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಪಡಿಸಿದ್ದಂತ ಮಧು ಬಂಗಾರಪ್ಪ ಅವರು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

 

ಇದೀಗ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವಂತ ಮಧು ಬಂಗಾರಪ್ಪ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಸೇರೋದಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

 


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ