Breaking News

ಮೂರು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬನ ಅತ್ಯಾಚಾರ

Spread the love

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ನ್ಯೂಕ್ಯಾಸಲ್ ಸಿಟಿಯಲ್ಲಿ ಮಾನವ ತಲೆತಗ್ಗಿಸುವ ಘಟನೆ ನಡೆದಿದೆ. ಮೂರು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.

ಜೇಮ್ಸ್ ರುಡಾಲ್ಫ್ ಹೆಸರಿನ ವ್ಯಕ್ತಿ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆರೋಪಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಅತ್ಯಾಚಾರದ ನಂತ್ರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಡಿಸೆಂಬರ್ 16ರಂದೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಘಟನೆ ಮರುಸೃಷ್ಟಿಸಿ ತನಿಖೆ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ನ್ಯೂಕ್ಯಾಸೆಲ್ ಜನರು ಕೋಪಗೊಂಡಿದ್ದಾರೆ. ಪೊಲೀಸರು ಸೂಕ್ಷ್ಮವಾಗಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯನ್ನು ನಾಲ್ಕು ವಾರದೊಳಗೆ ಪೂರ್ಣಗೊಳಿಸುವಂತೆ ಕೋರ್ಟ್ ಪೊಲೀಸರಿಗೆ ಆದೇಶ ನೀಡಿದೆ. ಮೂರು ತಿಂಗಳ ಮಗುವಿನ ಅತ್ಯಾಚಾರ ಪ್ರಕರಣದ ವಿಚಾರಣೆ ಮಾರ್ಚ್ ನಲ್ಲಿ ನಡೆಯಲಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ