Breaking News

ಮಗುವನ್ನು ಅಪಹರಿಸಿದ್ದ ಖತರನಾಕ್ ಗ್ಯಾಂಗ್ ನ್ನು ನಾಲ್ಕೇ ದಿನದಲ್ಲಿ ಪೊಲೀಸರು ಪತ್ತೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. 

Spread the love

ಬೆಳಗಾವಿ – ಅಥಣಿ ತಾಲೂಕಿನ ಸಂಕೋನಟ್ಟಿಯಲ್ಲಿ 2 ವರ್ಷದ ಮಗುವನ್ನು ಅಪಹರಿಸಿದ್ದ ಖತರನಾಕ್ ಗ್ಯಾಂಗ್ ನ್ನು ನಾಲ್ಕೇ ದಿನದಲ್ಲಿ ಪೊಲೀಸರು ಪತ್ತೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಮಗುವನ್ನು ಅಪಹರಿಸಿದ ಕಾರಣವೇ ವಿಚಿತ್ರವಾಗಿದೆ.

ಸಂಕೋನಟ್ಟಿಯ ಸದಾಶಿವ ಪಾರ್ಕ್ ಹತ್ತಿರ ಜೋಪಡಿಪಟ್ಟಿಯಲ್ಲಿ ವಾಸಿಸುತ್ತಿರುವ ಹುಸೇನವ್ವ ಚಿನ್ನಪ್ಪ ಬಹುರೂಪಿ ಅಲಿಯಾಸ ಬಾದಗಿ ಎನ್ನುವವರ 2 ವರ್ಷದ ಮಗು ಕಾಣೆಯಾಗಿರುವ ಕುರಿತು ಫೆ.6ರಂದು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ಅಮರನಾಥ ರಡ್ಡಿ, ಅಥಣಿ ಡಿಎಸ್ಪಿ ಎಸ್.ವಿ.ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ್ ಉಸ್ತುವಾರಿಯಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಅಥಣಿ ಪಿಎಸ್ಐ ಕುಮಾರ ಹಾಡಕರ್, ಐಗಳಿ ಪಿಎಸ್ಐ ಶಿವರಾಜ ನಾಯ್ಕೋಡಿ, ಕಾಗವಾಡ ಪಿಎಸ್ಐ ಹಣಮಂತ ಧರ್ಮಟ್ಟಿ ನೇತೃತ್ವ ವಹಿಸಿದ್ದರು. ಸಿಬ್ಬಂದಿಗಳಾದ ಎ ಎ ಈರಕರ್, ಪಿ ಬಿ ನಾಯ್ಕ್, ಪಿ ಎನ್ ಕುರಿ, ಬಿ ವೈ ಮನ್ನಾಪುರ, ಜಿ.ಎಚಿ.ಹೊನವಾಡ, ಆರ್.ಸಿ.ಹಾದಿಮನಿ, ಕೆ ಬಿ ಶಿರಗೂರ, ಶಿವಕುಮಾರ ದೊಡಮನಿ, ಎಸ್ ಬಿ ಪಾಟೀಲ ತಂಡದಲ್ಲಿದ್ದರು.

ಅಪಹರಣದ ಬಗ್ಗೆ ಯಾವುದೇ ಸುಳಿವು ಇಲ್ಲದಿದ್ದರೂ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮಾಹಿತಿ ಸಂಗ್ರಹಿಸಿ ಈ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ