Breaking News

ಈ ಬಾರಿಯ ಬಜೆಟ್‍ನಲ್ಲಿ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನವನ್ನು ಶೇ.10ರಿಂದ 15ರಷ್ಟು ಕಡಿತಗೊಳಿಸಲು ತೀರ್ಮಾನ:B.S.Y.

Spread the love

ಬೆಂಗಳೂರು, ಫೆ.12- ರಾಜ್ಯದಲ್ಲಿ ಈ ಬಾರಿ ಕೋವಿಡ್-19 ಬಂದ ಹಿನ್ನೆಲೆ ಎಲ್ಲಾ ಚಟುವಟಿಕೆಗಳು ಸ್ತಬ್ಧಗೊಂಡು ಬೊಕ್ಕಸಕ್ಕೆ ಆದಾಯ ಕುಸಿತಗೊಂಡಿರುವ ಕಾರಣ ಈ ಬಾರಿಯ ಬಜೆಟ್ ಗಾತ್ರ ಹಾಗೂ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನ ಕಡಿತವಾಗಲಿದೆ. ಮಾರ್ಚ್ 5ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಆದಾಯ ಸಂಪನ್ಮೂಲ ಕ್ರೂಢೀಕರಣವೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಲಾಕ್‍ಡೌನ್ ತೆರವುಗೊಳಿಸಿದ ನಂತರ ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿರುವ ಅಬಕಾರಿ, ಸಾರಿಗೆ, ಮುದ್ರಣ ಮತ್ತು ನೋಂದಣಿ, ವಾಣಿಜ್ಯ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಆದಾಯ ಪ್ರಮಾಣ ಏರಿಕೆಯಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಸಂಗ್ರಹವಾಗಿಲ್ಲ.ಇತ್ತೀಚೆಗೆ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ದ ಯಡಿಯೂರಪ್ಪ ಅವರು, ರಾಜ್ಯದ ಆರ್ಥಿಕ ಸ್ಥಿತಿ ಅಷ್ಟೇನು ಆಶಾದಾಯಕವಾಗಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‍ನಲ್ಲಿ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನವನ್ನು ಶೇ.10ರಿಂದ 15ರಷ್ಟು ಕಡಿತಗೊಳಿಸಲು ತೀರ್ಮಾನಿಸಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ