Breaking News

ತುಳು ಚಿತ್ರ ನಿರ್ದೇಶಕನಿಗೆ ಕನ್ನಡ ನಟಿಯಿಂದ ಮೋಸ

Spread the love

ಮಂಗಳೂರು : ತುಳು ಚಿತ್ರ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಇವರಿಗೆ ನೀಡಿದ 40 ಲಕ್ಷ ರೂ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪದ್ಮಜಾ ರಾವ್‌ಗೆ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ನೀಡಿದೆ.

ವೀರೇಂದ್ರ ಶೆಟ್ಟಿ ಕಾವೂರು ಕನ್ನಡದ ಚಿತ್ರರಂಗದ ನಟಿ ಪದ್ಮಾಜಾ ರಾವ್ ವಿರುದ್ಧ ಮಂಗಳೂರಿನ ಕೋರ್ಟ್‌ನಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಎರಡು ವರ್ಷಗಳ ಹಿಂದೆ ಪದ್ಮಜಾ ರಾವ್, ‘ಚಾಲಿಪೋಲಿಲು’ ಚಿತ್ರದಲ್ಲಿ ನಟಿಸುತ್ತಿದ್ದಾಗ, ಆ ಸಿನೆಮಾದ ನಿರ್ದೇಶಕ ವೀರೇಂದ್ರ ಶೆಟ್ಟಿಯಿಂದ ಹಂತ ಹಂತವಾಗಿ 40 ಲಕ್ಷ ರೂ. ಪಡೆದು, ವಾಪಸ್ ನೀಡಿರಲಿಲ್ಲ ಎಂದು ಆರೋಪಿಸಿ ನಿರ್ದೇಶಕ ಕೋರ್ಟ್ ಮೆಟ್ಟಿಲೇರಿದ್ದಾರೆ.

ಒಂದು ಲಕ್ಷ ರೂ. ಮಾತ್ರ ನಗದು ರೂಪದಲ್ಲಿ ಕೊಟ್ಟಿದ್ದು, ಉಳಿದೆಲ್ಲವನ್ನು ಚೆಕ್ ರೂಪದಲ್ಲಿ ನೀಡಲಾಗಿದೆ. ಸಂಸ್ಥೆಯ ಹೆಸರಲ್ಲೇ ಸಾಲ ನೀಡಿದ್ದೆ. ಅದರ ಎಲ್ಲ ದಾಖಲೆಗಳು ನಮ್ಮಲ್ಲಿ ಇವೆ. 2020ರ ಸೆಪ್ಟಂಬರ್‌ನಲ್ಲಿ ಚೆಕ್‌ಬೌನ್ಸ್ ಕೇಸು ದಾಖಲು ಮಾಡಿದ್ದು, ನೋಟಿಸ್ ಹೋಗಿತ್ತು. ನೋಟಿಸ್‌ಗೆ ಉತ್ತರ ನೀಡದ ಕಾರಣ ಪ್ರಕರಣ ಮತ್ತೆ ನವೆಂಬರ್‌ನಲ್ಲಿ ವಿಚಾರಣೆಗೆ ಬಂದಿತ್ತು.

ಆಗಲೂ ನಟಿ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ನೀಡಿದೆ. ಬೆಂಗಳೂರಿನ ತಲಘಟ್ಟಪುರ ಪೊಲೀಸರಿಗೆ ಬಂಧಿಸಿ ಕರೆತರುವಂತೆ ಸೂಚನೆ ನೀಡಲಾಗಿದೆ. ಮಾರ್ಚ್ 9ಕ್ಕೆ ಪದ್ಮಜಾ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಬೇಕಿದೆ ಎಂದು ನಿರ್ದೇಶಕ ವೀರೇಂದ್ರ ಶೆಟ್ಟಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

Spread the love ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ