Breaking News

A.B.V.P.ಅಧ್ಯಕ್ಷರಾಗಿದ್ದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು..?

Spread the love

೪೦ ವರ್ಷದ ಎಬಿವಿಪಿಗೂ, ಜನಸಂಘಕ್ಕೂ ಈಗಿನ ಆರ್‌ಎಸ್‌ಎಸ್, ಬಿಜೆಪಿಗೂ ಸಾಕಷ್ಟು ವ್ಯತ್ಯಾಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
 ಸತೀಶ ಜಾರಕಿಹೊಳಿ ಎಬಿವಿಪಿ ಅಧ್ಯಕ್ಷರಾಗಿದ್ದರು ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ೪೦ ವರ್ಷದ ಎಬಿವಿಪಿ, ಆರ್‌ಎಸ್‌ಎಸ್, ಜನಸಂಘಕ್ಕೂ ಬಿಜೆಪಿಗೂ ಯಾವುದೇ ರೀತಿ ಸಂಬAಧ ಇಲ್ಲ. ಮೊದಲು ಜನಸಂಘದ ಕಾರ್ಯಕ್ರಮ ನೋಡಲು ಇಡೀ ಊರಿಗೆ ಊರೇ ಹೋಗುತ್ತಿತ್ತು.

ಹೀಗಾಗಿ ಬಹಳಷ್ಟು ವ್ಯತ್ಯಾಸವಾಗಿದೆ, ಹೋರಾಟ, ವಿಚಾರಗಳಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಹೀಗಾಗಿ ನಾವು ಅಧ್ಯಕ್ಷರಾಗಿದ್ದು ಮುಖ್ಯವಾಗಲ್ಲ ಎಂದರು.

ಇನ್ನು ಇನ್ನು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರಕ್ಕೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಗಳು ಸಮಯಾವಕಾಶ ಕೇಳಿದ್ದಾರೆ. ತಕ್ಷಣ ಯಾವುದು ಮಾಡಲು ಆಗುವುದಿಲ್ಲ. ಸ್ವಾಮೀಜಿ ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿದೆ.

ಇವತ್ತೆ ಮಾಡುವಂತೆ ಸರ್ಕಾರಕ್ಕೆ ನಾವು ಪಟ್ಟು ಹಿಡಿಯಲು ಆಗುವುದಿಲ್ಲ ಎಂದು ಹೇಳಿದರು. ಅದೇ ರೀತಿ ಕುರುಬ ಸಮುದಾಯ ಸೇರಿ ಇನ್ನಿತರ ಸಮುದಾಯಗಳ ಮೀಸಲಾತಿ ಹೋರಾಟದ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.


Spread the love

About Laxminews 24x7

Check Also

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Spread the love ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ