Breaking News

ಖೋಡೇಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ: ರೂ.878 ಕೋಟಿ ಅಕ್ರಮ ಆಸ್ತಿ ಪತ್ತೆ

Spread the love

ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ.

ಖೋಡೇಸ್ ಗ್ರೂಪ್’ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ನಡೆಸಿದಾಗ ರೂ.878 ಕೋಟಿಯಷ್ಟು ಅಘೋಷಿತ ಆದಾಯ ಪತ್ತೆಯಾಗಿದ್ದು, ತನಿಖೆ ಮುಂದುವರೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಖೋಡೇಸ್ ಗ್ರೂಪ್ ಅಪಾರ ಪ್ರಮಾಣದಲ್ಲಿ ಭೂಮಿಯನ್ನು ಹೊಂದಿದ್ದು, ವಸತಿ ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಬೆಂಗಳೂರು ಬಿಲ್ಡರ್ ಗಳ ಜೊತೆಗೂಡಿ ರೂ.692.82 ಕೋಟಿ ಆರ್ಥಿಕ ವ್ಯವಹಾರ ನಡೆಸುತ್ತಿರುವ ದಾಖಲೆಗಳು ಸಿಕ್ಕಿವೆ.

ಕೇರಳ ಮೂಲಕ ಮದ್ಯ ಉತ್ಪಾದನಾ ಘಟಕವೊಂದರ ಜೊತೆ ರೂ.74 ಕೋಟಿ ವಹಿವಾಟು ನಡೆಸಿದ್ದು, ಇದನ್ನು ಲೆಕ್ಕದಲ್ಲಿ ತೋರಿಸಿಲ್ಲ. ರೂ.17 ಕೋಟಿ ನಕಲಿ ವೆಚ್ಚವನ್ನು ತೋರಿಸಲಾಗಿದೆ. ರೂ.9 ಕೋಟಿ ವಿವರಿಸಲಾಗದ ವೆಚ್ಚ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಲವು ವರ್ಷಗಳಿಂದ ತಮ್ಮ ಉದ್ಯೋಗಿಗಳು ಮತ್ತು ಸಹವರ್ತಿಗಳ ಹೆಸರಿನಲ್ಲಿ ಬೇನಾಮಿ ಆಸ್ತಿಗಳಲ್ಲಿ ಕಂಪನಿಯು ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡಿದೆ. ರೂ.150 ಕೋಟಿಗಿಂತ ಹೆಚ್ಚು ಮೊತ್ತವನ್ನು 35 ಮಂದಿಯ ಹೆಸರಲ್ಲಿ ಬೇನಾಮಿ ಹೂಡಿಕೆ ಮಾಡಿರುವುದು ಶೋಧ ಕಾರ್ಯ ವೇಳೆ ಪತ್ತೆಯಾಗಿದೆ. ಅಲ್ಲದೇ, ವಿದೇಶಿ ಆಸ್ತಿಗಳು ಸಹ ಪತ್ತೆಯಾಗಿವೆ. ಕಂಪನಿಯ ನಿರ್ದೇಶಕರ ಹೆಸರಲ್ಲಿ ಆ ಆಸ್ತಿಗಳಿವೆ. ತನಿಖೆಯು ಮುಂದುವರೆದಿದ್ದು, ಸ್ಪಷ್ಟನೆಗಾಗಿ ಕಂಪನಿಯ ಮುಖ್ಯಸ್ಥರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ