Breaking News

ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ

Spread the love

ಮೈಸೂರು: ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ.

ಕಾಮಗಾರಿಗೆ ಗುತ್ತಿಗೆಯನ್ನು ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ವಿದ್ಯುದೀಕರಣಕ್ಕಾಗಿ ಇರುವ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ ವಿದ್ಯುದೀಕರಣ ಕಾಮಗಾರಿ 12 ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ, ಫೆ.1 ರಂದು ಮಂಡನೆಯಾದ ಬಜೆಟ್ ನಲ್ಲಿ ಇದಕ್ಕಾಗಿ ಅನುದಾನವನ್ನೂ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಗೆ 18.89 ಕೋಟಿ ರೂಪಾಯಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸುಮಾರು 71 ಕಿ.ಮೀ ಉದ್ದದ ವಿದ್ಯುದೀಕರಣ ಯೋಜನೆ ಇದಾಗಿದ್ದು, ಈ ಮಾರ್ಗದಲ್ಲಿ ಕಚೇರಿಗೆ ತೆರಳುವವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ರೈಲುಗಳ ಸಂಚಾರ ವೇಗವಾಗಿರುವುದಕ್ಕೆ ಹಾಗೂ MEMU ಸೇವೆಗಳನ್ನು ಒದಗಿಸುವುದಕ್ಕೆ ಸಹಕಾರಿಯಾಗಲಿದೆ.

ಕಡಕೊಳದ ಬಳಿ ಸ್ಥಾಪನೆಯಾಗುತ್ತಿರುವ ಇನ್ಲ್ಯಾಂಡ್ ಕಂಟೇನರ್ ಟರ್ಮಿನಲ್ ಜೊತೆಗೆ CONCOR ಮಲ್ಟಿ ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್​ ನ ದೃಷ್ಟಿಯಿಂದಲೂ ಈ ವಿದ್ಯುದೀಕರಣ ಯೋಜನೆ ಮಹತ್ವ ಪಡೆದುಕೊಂಡಿದೆ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ