Breaking News

ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ

Spread the love

ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪ ಹಾಗೂ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ನೋಟೀಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರ ನಿಡುವಂತೆ ಸೂಚಿಸಿದೆ.

ಯತ್ನಾಳ್ ಯಡಿಯೂರಪ್ಪ ವಿರುದ್ಧ ಸಿಡಿ ಬ್ಲ್ಯಾಕ್ ಮೇಲ್ ಹೇಳಿಕೆ ಹಾಗೂ ನಾನೇ ಮುಂದಿನ ಮುಖ್ಯಮಂತ್ರಿ ಎಂಬ ರೀತಿಯಲ್ಲಿ ಪರೋಕ್ಷ ಹೇಳಿಕೆಗಳನ್ನು ನೀಡಿದ್ದರು ಈ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ