Breaking News
Home / ರಾಜ್ಯ / ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು

ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ 6 ಆರೋಪಿಗಳನ್ನು ಬಂಧಿಸಿದ ಪೊಲೀಸರು

Spread the love

ಹೈದರಾಬಾದ್: ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ರಾಜು, ರಮೇಶ್, ಶಿವ, ನಾದಂ, ಭಾಸ್ಕರ, ಕುಮಾರ್ ಎಂದು ಗುರುತಿಸಲಾಗಿದೆ. ಕಾಲೇಜು ತರಗತಿಯನ್ನು ಮುಗಿಸಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋ ಚಾಲಕನೇ ಕಿಡ್ನಾಪ್ ಮಾಡಿ ಸ್ನೇಹಿತರ ಜೊತೆ ಓಮ್ನಿ ಕಾರಲ್ಲಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಗ್ಯಾಂಗ್ ರೇಪ್ ನಡೆಸಿದ್ದರು. ಯುವತಿಯನ್ನು ವಿವಸ್ತ್ರಗೊಳಿಸಿ ಘಟ್ಕೇಸ್ಕರ್ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.

ಆರೋಪಿಗಳು ಈ ಹಿಂದೆ ಕೂಡ ಇಂಥದ್ದೇ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ