Breaking News
Home / Uncategorized / ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ.

ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ.

Spread the love

ಬೆಂಗಳೂರು: ಪ್ರತಿಯೊಂದಕ್ಕೂ ದುಪ್ಪಟ್ಟು ತೆರಿಗೆ, ದಂಡ, ಶುಲ್ಕ ಕಟ್ಟಿ ಹೈರಾಣಾಗಿರುವ ಬೆಂಗಳೂರಿನ ಜನರಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಕಾದಿದೆ. ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ. ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ರೂಪಿಸಿರುವ ನೂತನ ಪಾರ್ಕಿಂಗ್ ನೀತಿಯಲ್ಲಿ ಹಲವು ಅಂಶಗಳನ್ನ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯು ಈ ಹೊಸ ನೀತಿಯ ಕರಡನ್ನ ಅಂಗೀಕರಿಸಿದೆ. ಇನ್ನು ಕೆಲವೇ ತಿಂಗಳಲ್ಲಿ ಇದು ಬೆಂಗಳೂರಿನಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಹಲವು ಕ್ರಮಗಳಲ್ಲಿ ಹೊಸ ಪಾರ್ಕಿಂಗ್ ನೀತಿಯೂ ಒಂದು ಎಂದು ಹೇಳಲಾಗುತ್ತಿದೆ.

ಹೊಸ ಪಾರ್ಕಿಂಗ್ ನೀತಿಯ ಕರಡು ಪ್ರತಿಯಲ್ಲಿರುವ ಅಂಶಗಳ ಪ್ರಕಾರ, ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲು ಜನರು ಶುಲ್ಕ ಪಾವತಿಸಬೇಕು. ವಾಣಿಜ್ಯ ಸ್ಥಳಗಳಲ್ಲಿ ಈ ಶುಲ್ಕದ ಪ್ರಮಾಣ ಹೆಚ್ಚಾಗಿರುತ್ತದೆ. ಅಲ್ಲದೇ, ಗಂಟೆಯ ಲೆಕ್ಕದಲ್ಲಿ ಶುಲ್ಕ ವಿಧಿಸಲಾಗುತ್ತದೆ. ಅಷ್ಟೇ ಅಲ್ಲ, ನಿಮ್ಮ ಮನೆ ಬಳಿ ವಾಹನ ನಿಲ್ಲಿಸುವುದಕ್ಕೂ ಶುಲ್ಕ ಪಾವತಿಸಬೇಕಾಗುತ್ತದೆ. ವಸತಿ ಪ್ರದೇಶಗಳಲ್ಲಿ ಪಾರ್ಕಿಂಗ್ ಜಾಗವನ್ನ ನಿರ್ಮಿಸಿ ಅಲ್ಲಿ ಹಣ ಪಾವತಿಸಿ ವಾಹನಗಳನ್ನ ನಿಲ್ಲಿಸಲು ಅವಕಾಶ ಮಾಡಿಕೊಡುವ ಯೋಜನೆ ಇದೆ. ಆಯಾಯ ನಗರ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಬಿಬಿಎಂಪಿಯಿಂದ ಪ್ರತಿಯೊಂದು ಏರಿಯಾದಲ್ಲೂ ಇದಕ್ಕಾಗಿ ರೂಪುರೇಖೆ ಆಗುವ ಸಾಧ್ಯತೆ


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ