Breaking News

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ:

Spread the love

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಯಾವುದೇ ರೀತಿ ತಾಂತ್ರಿಕ ಸಮಸ್ಯೆ ಇಲ್ಲ. ಇನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮೀಸಲಾತಿ ಕೇಳುವ ಹಕ್ಕಿದೆ ಎಂದರು.

ಅದೇ ರೀತಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ. ಹೀಗಾಗಿಯೆ ಮೊನ್ನೆ ವಾಲ್ಮೀಕಿ ಜಾತ್ರೆಗೆ ಬಂದಿದ್ದರು. ಇಲ್ಲದೇ ಹೋಗಿದ್ದರೆ ಜಾತ್ರೆಗೆ ಬರುತ್ತಿರಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ