ಬೆಳಗಾವಿ : ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ, ನಾಗರೀಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ, ಪಡಿತರದಲ್ಲಿ ಅಕ್ಕಿ ಮತ್ತು ಗೋಧಿ ವಿತರಣೆಯ ಪ್ರಮಾಣ ಕಡಿತಗೊಳಿಸಿ, ಅದೇ ಪ್ರಮಾಣದಲ್ಲಿ ರಾಗಿ, ಜೋಳ ಅಥವಾ ಸ್ಥಳೀಯವಾಗಿ ಬಳಕೆಯಲ್ಲಿರುವ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ 3 ಕೆಜಿ ಜೋಳ, 2 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ಕೆಜಿ ರಾಗಿ, 2 ಕೆಜಿ ಅಕ್ಕಿ ಕೊಡಲಾಗುವುದು. ಭೌಗೋಳಿಕವಾಗಿ ಸ್ಥಳೀಯರ ಆಹಾರ ಪದ್ದತಿಗೆ ಅನುಗುಣವಾಗಿ ಪಡಿತರ ವಿತರಿಸಲಾಗುತ್ತದೆ ಎಂದು ಹೇಳುವ ಮೂಲಕ ಪಡಿತರದಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
Laxmi News 24×7