Breaking News

ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಮಸೂದೆ ಸಿದ್ಧ: ಧಾರವಾಡ, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಗಳು ಹಾಗೂ ಇವುಗಳ ಅಕ್ಕಪಕ್ಕದ ಜಿಲ್ಲೆಗಳ ಗ್ರಾಮಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡುವ ಸಲುವಾಗಿ ವಿಶೇಷ ಹೂಡಿಕೆ ವಲಯ ಮಾಡಲಾಗುವುದು. ಇದಕ್ಕಾಗಿ ಮಸೂದೆ ಸಿದ್ಧಪಡಿಸಲಾಗಿದ್ದು, ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಶೆಟ್ಟರ್‌ ತಿಳಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ