Breaking News

ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ..?

Spread the love

ಬೆಳಗಾವಿ: ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯ ರಕ್ಷಣಾ ಇಲಾಖೆಗೆ ಸೇರಿದ ಜಮೀನನ್ನು ಐಟಿ, ಬಿಟಿ ಪಾರ್ಕ್ ನಿರ್ಮಾಣಕ್ಕೆ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಐಟಿ,ಬಿಟಿ ಸಚಿವ ಅಶ್ವಥ್ ನಾರಾಯಣ ಮತ್ತು ಶಾಸಕ ಅಭಯ ಪಾಟೀಲ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ, ಬೆಳಗಾವಿ ನಗರದಲ್ಲಿ ಕೆ,ಎಲ್,ಇ ಆಸ್ಪತ್ರೆ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 772 ಎಕರೆ ರಕ್ಷಣಾ ಇಲಾಖೆಗೆ ಸೇರಿದ ಜಮೀನು ಇದ್ದು ಈ ಜಮೀನನ್ನು ಐಟಿ,ಬಿಟಿ ಪಾರ್ಕ್ ನಿರ್ಮಿಸಲು ಕರ್ನಾಟಕ ಸರ್ಕಾರಕ್ಕೆ ಹಸ್ತಾಂತರ ಮಾಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ