ಕೊಪ್ಪ: 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಸ್ಸಾಂನ ವ್ಯಕ್ತಿಯ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಶನಿವಾರ ಪ್ರಕರಣ ದಾಖಲಾಗಿದೆ.
‘ಸಂತ್ರಸ್ತೆಯೂ ಅಸ್ಸಾಂನವಳಾಗಿದ್ದು, ಆಕೆಯ ಕುಟುಂಬ ಎಸ್ಟೇಟ್‌ವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದೆ. ಹತ್ತಿರದಲ್ಲೇ ವಾಸವಿದ್ದ ಆರೋಪಿಯು ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆಕೆಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Laxmi News 24×7