Breaking News

ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ

Spread the love

ಬೆಳಗಾವಿ – ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ.
ಈ ದೇಶಕ್ಕೆ ಉದ್ಯೋಗ ಖಾತ್ರಿ ಯೋಜನೆಯ ಕೊಡುಗೆ ನೀಡಿದ್ದು ಕಾಂಗ್ರೆಸ್ ಸರಕಾರ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಗ ಇದೇ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇತಿಹಾಸವನ್ನು ಅರಿತು ಮಾತನಾಡಲಿ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಭಾನುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಹಾಂತೇಶ ಕವಟಗಿಮಠ, ಉದ್ಯೋಗ ಖಾತ್ರಿ ಯೋಜನೆ  ಶಾಸಕರದ್ದಲ್ಲ. ಕೇಂದ್ರ ಸರಕಾರದ್ದು ಎಂದು ಹೇಳಿದ್ದರು. ಪರೋಕ್ಷವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗೆ ಟಾಂಗ್ ನೀಡಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಲಕ್ಷ್ಮಿ ಹೆಬ್ಬಾಳಕರ್,  ಉದ್ಯೋಗ ಖಾತ್ರಿ ಯೋಜನೆಯನ್ನು  ನಾನು ತಂದಿದ್ದೇನೆ ಎಂದು ಎಲ್ಲಿಯೂ ಹೇಳಿಲ್ಲ. ಯೋಜನೆಯನ್ನು ತಂದ ಕೀರ್ತಿ ಕಾಂಗ್ರೆಸ್ ಪಕ್ಷದ್ದು. ಅದನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಜಾರಿಗೊಳಿಸುವ ಕೆಲಸವನ್ನು ಶಾಸಕಿಯಾಗಿ ನಾನು ಮಾಡುತ್ತಿದ್ದೇನೆ. ನನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿದ್ದೇನೆ. ಮಹಾಂತೇಶ ಕವಟಗಿಮಠ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಜವಾಬ್ದಾರಿಯಿಂದ ಮಾತನಾಡುವುದನ್ನು ಕಲಿಯಲಿ ಎಂದು ಹೆಬ್ಬಾಳಕರ್ ಸೂಚಿಸಿದ್ದಾರೆ.

Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ