ಬೆಂಗಳೂರು: 2021ನೇ ಜೂನ್ ಮಾಹೆಯಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ,ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.
