Breaking News

ನಿಧಿ ಸಮರ್ಪಣಾ ಅಭಿಯಾನ ವೇಳೆ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಎಚ್‍ಪಿ, ಬಜರಂಗದಳ ಪ್ರತಿಭಟನೆ

Spread the love

ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ವೇಳೆ ಬಜರಂಗದಳ ಕಾರ್ಯಕರ್ತನ ಮೇಲೆ 10-15 ಯುವಕರ ತಂಡವೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

ದೆಹಲಿಯಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ತೆರಳಿದ್ದ ವೇಳೆ ಬಜರಂಗದಳ ಕಾರ್ಯಕರ್ತ ರಿಂಕು ಶರ್ಮಾನ ಮೇಲೆ ಶ್ರೀರಾಮನ ಪರ ಘೋಷಣೆ ಕೂಗಿದ್ದಕ್ಕೆ ಮುಸ್ಲಿಂ ಸಮುದಾಯದ 10-15 ಯುವಕರ ಗುಂಪೊಂದು ಹಲ್ಲೆ ನಡೆಸಿ ಆತನ ಮನೆಯಲ್ಲಿ ದಾಂಧಲೆ ಮಾಡಿದೆ.

ನಂತರ ಆತನನ್ನು ಹತ್ಯೆ ಮಾಡಿದೆ. ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಹತ್ಯೆ ಖಂಡಿಸಿ ಘೋಷಣೆ ಕೂಗಿದರು. ನ್ಯಾಯಕ್ಕೆ ಆಗ್ರಹಿಸಿದರು.

ಈ ವೇಳೆ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತ ಮಾತನಾಡಿ,ಬಜರಂಗ ದಳ ಕಾರ್ಯಕರ್ತ ರಿಂಕು ಶರ್ಮಾ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಶ್ರೀರಾಮನ ಪರ ಘೋಷಣೆ ಕೂಗಿದ್ದಕ್ಕೆ ಮುಸ್ಲಿಂ ಸಮುದಾಯದ 10-15 ಯುವಕರ ಗುಂಪೊಂದು ಹಲ್ಲೆ ನಡೆಸಿ ಆತನ ಮನೆಯಲ್ಲಿ ದಾಂಧಲೆ ಮಾಡಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಿಸಲು ಯತ್ನಿಸಿದೆ. ನಂತರ ಯುವಕರ ಗುಂಪು ಆತನನ್ನು ಹತ್ಯೆ ಮಾಡಿದೆ. ಕೂಡಲೇ ದುಷ್ಕರ್ಮಿ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಭಜರಂಗದಳದ ಇನ್ನೊಬ್ಬ ಕಾರ್ಯಕರ್ತ ಮಾತನಾಡಿ, ಶ್ರೀರಾಮನ ಪರ ಘೋಷಣೆ ಕೂಗಿದ ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಿದ ಕ್ರಮ ಖಂಡನೀಯವಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿ

Spread the love ನಮ್ಮ ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ