Breaking News

ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ

Spread the love

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದು, ಈಗಾಗಲೇ ಮುಖಂಡರ ಜೊತೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ. ಸಿದ್ದರಾಮಯ್ಯ ಹೋಗುವ ದಾರಿಯಲ್ಲಿ ನಾನು ಹೋಗುತ್ತೇನೆ. ಅವರು ಮಿಸಲಾತಿ ಹೋರಾಟಕ್ಕೆ ಹೋಗಿಲ್ಲ, ನಾನೂ ಕೂಡ ಹೋಗಿಲ್ಲ. ಸಿದ್ದರಾಮಯ್ಯ ಕೋಲಾರದಿಂದಲೇ ಅಹಿಂದ ಸಮಾವೇಶ ಆರಂಭಿಸಲಿ. ನಾನೇ 2 ಲಕ್ಷ ಜನರನ್ನು ಸೇರಿಸುತ್ತೇನೆ. ನಾನು ಸ್ಥಾಪನೆ ಮಾಡಿರುವ ನಮ್ಮ ಕಾಂಗ್ರೆಸ್ ಈಗಿಲ್ಲ. ನನ್ನದೇನಿದ್ರೂ ಇನ್ಮುಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂದರು.

ನಾನು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ. ಈ ಬಗ್ಗೆ ಮುಖಂಡರ ಜೊತೆ ಚರ್ಚೆ ನಡೆದಿದೆ. ನಾನು ಎಂಎಲ್ ಎ ಆಗಬೇಕು. 10 ವರ್ಷ ಕಾಂಗ್ರೆಸ್ ನಲ್ಲಿಯೂ ಇರಬೇಕು ಎಂಬ ಆಸೆಯಿದೆ ಎಂದು ಹೇಳಿದರು.

ನನಗೆ ಮೊದಲಿನಿಂದಲೂ ಬಿಜೆಪಿ ಅಂದರೆ ಆಗುತ್ತಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ನಾನು ಮಂತ್ರಿಯಾಗಿದ್ದು ನಿಜ. ಆದ್ರೆ ಪಕ್ಷವೇ ಬೇರೆ, ಸರ್ಕಾರವೇ ಬೇರೆ ಎಂದು ಇದೇ ವೇಳೆ ಹೇಳಿದ್ದಾರೆ.


Spread the love

About Laxminews 24x7

Check Also

RSS ಬಿಸಿಬಿಸಿ ಚರ್ಚೆಗೆ ತುಪ್ಪ ಸುರಿದು ವಿವಾದದ ಕಿಡಿ ಹೊತ್ತಿಸಿದ ಸಚಿವ ಶಿವರಾಜ್ ತಂಗಡಗಿ

Spread the loveಕೊಪ್ಪಳ, (ಅಕ್ಟೋಬರ್ 18): ಸಾರ್ವಜನಿಕ ಸ್ಥಳಗಳಲ್ಲಿ ಆರ್​ ಎಸ್​ಎಸ್​  (RSS) ಕಾರ್ಯಚಟುವಟಿಕೆಗಳಿಗೆ ನಿರ್ಬಂಧಿಸುವ ಬಗ್ಗೆ ಕಾಂಗ್ರೆಸ್, ಬಿಜೆಪಿ ಹಾಗೂ ಹಿಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ