Breaking News

ಮಹಿಳೆಗೆ ಮೈದುನನ್ನು ಹೆಗಲ ಮೇಲೆ ಹೊತ್ತು 3 ಕಿ.ಮೀ. ನಡೆಯುವ ಶಿಕ್ಷೆ: ವೀಡಿಯೋ ವೈರಲ್!

Spread the love

ಕ್ಷುಲಕ ಕಾರಣಕ್ಕಾಗಿ ಮಹಿಳೆಯೊಬ್ಬರಿಗೆ ಮೈದುನನ್ನು ಬಲವಂತವಾಗಿ ಹೆಗಲ ಮೇಲೆ ಹೊರಿಸಿ ಕನಿಷ್ಠ 3 ಕಿ.ಮೀ. ನಡೆಸಿಕೊಂಡು ಹೋಗುವ ಘೋರ ಶಿಕ್ಷೆ ವಿಧಿಸಿದ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮಹಿಳೆಯನ್ನು ಕೋಲು-ದೊಣ್ಣೆ ಹಿಡಿದ ಯುವಕರು ಗುಂಪು ಬೆದರಿಕೆ ಹಾಕುತ್ತಾ ಮಹಿಳೆಯನ್ನು ನಡೆಸಿಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಹಿಳೆ ನಡೆದುಕೊಂಡು ಹೋಗುತ್ತಿದ್ದರೆ ಯುವಕರು ಗೇಲಿ ಮಾಡಿ ನಗುತ್ತಿದ್ದು, ಇನ್ನು ಕೆಲವರು ದೊಣ್ಣೆ ಹಾಗೂ ಕ್ರಿಕೆಟ್ ಬ್ಯಾಟ್ ನಿಂದ ಕೂಡ ಹೊಡೆದಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದುವರೆಗೆ ನಾಲ್ವರನ್ನು ಬಂಧಿಸಿದ್ದಾಗಿ ತಿಳಿಸಿದ್ದಾರೆ.

ಮತ್ತೊಬ್ಬ ಪುರುಷನ ಜೊತೆ ಸಂಬಂಧ ಹೊಂದಿದ್ದ ಮಹಿಳೆ ರಾಜಿ ಸಂಧಾನ ಮೂಲಕ ಗಂಡನನ್ನು ತೊರೆದಿದ್ದಳು. ಆದರೆ ಕೆಲವು ದಿನಗಳ ನಂತರ ಮಾಜಿ ಪತಿ ಹಾಗೂ ಆತನ ಕುಟುಂಬದವರು ಮನೆಗೆ ನುಗ್ಗಿ ಆಕೆಗೆ ಅವಮಾನ ಮಾಡಲು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

ಮಧ್ಯಪ್ರದೇಶದಲ್ಲಿ ಮಹಿಳೆಯರನ್ನು ಈ ರೀತಿ ಅಮಾನುಷವಾಗಿ ನಡೆಸಿಕೊಳ್ಳುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಜುಲೈನಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿತ್ತು.

 


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ