Breaking News

ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಸಂತಾಪ

Spread the love

ಬೆಳಗಾವಿ    : ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಸಂತಾಪ ಸೂಚಿಸಿದ್ದಾರೆ.   

ಪ್ರತಿಷ್ಠಿತ ಉದ್ಯಮಿಯಾಗಿರುವ ಹಂಜಿ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆತ್ಮೀಯ ಸ್ನೇಹಿತ ಹಂಜಿ ನಮ್ಮನಲ್ಲಿದ್ದು, ಪ್ರತಿಭಾವಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಇವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸತೀಶ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದರು.

ಮಹೇಶ ಕಡಪಟ್ಟಿ, ಬಸವರಾಜ ಜತ್ತಿ, ಈರಣ್ಣ ಬಿದರಿ ಇವರು ಕೂಡ ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ