Breaking News

SHOCKING: ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ನಟ ಆತ್ಮಹತ್ಯೆ

Spread the love

ಮುಂಬೈ: ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೊಂದಿಗೆ ಸಹನಟರಾಗಿದ್ದ ಸಂದೀಪ್ ನಹಾರ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಅಭಿನಯದ ‘ಕೇಸರಿ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಸಂದೀಪ್ ನಹಾರ್ ಮುಂಬೈನ ತಮ್ಮ ನಿವಾಸದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಗೊರೆಗಾಂವ್ ವೆಸ್ಟ್ ಎಸ್‌ಆರ್ವಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪೊಲೀಸರು ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಂದೀಪ್ ನಹಾರ್ ಡೆತ್ ನೋಟ್ ನಲ್ಲಿ ಕೌಟುಂಬಿಕ ಕಿರುಕುಳದ ಬಗ್ಗೆ ಬರೆದಿದ್ದಾರೆ. ಅಲ್ಲದೆ, ಆತ್ಮಹತ್ಯೆ ಮೊದಲು ಫೇಸ್ಬುಕ್ನಲ್ಲಿ ತಮ್ಮ ಪತ್ನಿ ಮತ್ತು ಅತ್ತೆ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ. ಮನೆಯಲ್ಲಿ ನಿರಂತರ ಜಗಳಗಳಿಂದ ಬೇಸತ್ತು ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದು, ತಮ್ಮ ಸಾವಿಗೆ ಯಾರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ