Breaking News

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

Spread the love

ಮುಂಬೈ, ಫೆ.16 (ಪಿಟಿಐ)- ಪೂನಾ-ಮುಂಬೈ ಎಕ್ಸ್‍ಪ್ರೆಸ್‍ವೇನಲ್ಲಿ ಮುಂಜಾನೆ ಲಾರಿಯೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಲ್ಲದೆ, ಖಾಪೊಲಿ ನಗರದ ಸಮೀಪ ಮತ್ತೊಂದು ವಾಹನಕ್ಕೂ ಗುದ್ದಿದ ಕಾರಣ ಸ್ಥಳದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಹಲವರಿಗೆ ಗಾಯಗಳಾಗಿರುವ ಘಟನೆ ಸಂಭವಿಸಿದೆ.ನವಿ ಮುಂಬೈ ಮುನಿಸಿಪಲ್ ಕಾಪೆರ್ರೇಷನ್ (ಎನ್‍ಎಂಎಂಸಿ)ಯ ಪಶುವೈದ್ಯರು ಸೇರಿದಂತೆ ಅವರ ಕುಟುಂಬದ ಮೂವರು ಒಂದು ಕಾರಿನಲ್ಲಿ ತೆರಳುತ್ತಿದ್ದರು. ಖಾಲಾಪುರ ಟೋಲ್ ಪ್ಲಾಜಾ ಕ್ಯೂನಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಒಂದು ಕಾರಿನಲ್ಲಿ ಪಶುವೈದ್ಯ ಡಾ. ವೈಭವ್ ಜಜಾಜರೆ, ಅವರ ತಾಯಿ, ಪತ್ನಿ ಹಾಗೂ ಮಗಳು ಇದ್ದರೆಂದು ತಿಳಿದುಬಂದಿದೆ.

ಲಾರಿ ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ವಿವರಣೆ ನೀಡಿದ್ದಾನೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ