ಬೆಳಗಾವಿ : ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಆಹ್ವಾನ ಮಾಡುವುದು ಪಕ್ಷ ಕಟ್ಟುವ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗುತ್ತಿದ್ದು, ಗೋಕಾಕದಿಂದಲೇ ಆರಂಭಿಸಲಾಗಿದೆ. ಅಶೋಕ ಪೂಜಾರಿ ಸೇರಿದಂತೆ ಹಲವು ಮುಖಂಡರಿಗೆ ಆಹ್ವಾನ ನೀಡಿದ್ದೇವೆ. ಸಮಯಾವಕಾಶ ಕೇಳಿದ್ದಾರೆ. ಅವರ ತೀರ್ಮಾನದ ಬಳಿಕ ಮುಂದಿನ ಹೆಜ್ಜೆಯಾಗಿದೆ’ ಎಂದರು.
‘ಈಗಾಗಲೇ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರು ಕಮೀಟಿ ರಚನೆ ಮಾಡಿದ್ದಾರೆ. ಆ ತಂಡ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೇರಲು ಇಚ್ಛೆ ಉಳ್ಳವರು, ಹಾಗೂ ಹಲವು ಕಾರಣಗಳಿಂದ ಪಕ್ಷ ಬಿಟ್ಟು ಹೋದ ನಾಯಕರನ್ನು ಆಹ್ವಾನ ಮಾಡಲಾಗುತ್ತಿದೆ. ನಾವು ಸಹ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಆಹ್ವಾನ ನೀಡುತ್ತೇವೆ ಎಂದು ಹೇಳಿದರು.
Laxmi News 24×7