Breaking News

ಇಂದು ರಾಜ್ಯಕ್ಕಾಗಮಿಸುತ್ತಿದ್ದಾರೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Spread the love

ಬೆಂಗಳೂರು,ಫೆ.17- ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಮಿಂಚಿನ ಬೆಳವಣಿಗೆಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ ನವದೆಹಲಿಯಿಂದ ಆಗಮಿಸಲಿರುವ ಅವರು, ಇಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಈ ವೇಳೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕೆಲವು ನಾಯಕರ ಜೊತೆ ಔಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.ಆದರೆ, ಅರುಣ್ ಸಿಂಗ್ ತಮ್ಮ ಭೇಟಿಯ ಸಂದರ್ಭದಲ್ಲಿ ಯಾವೆಲ್ಲಾ ನಾಯಕರ ಜೊತೆ ಮಾತುಕತೆ ನಡೆಸುವರು ಎಂಬುದು ಈ ವರೆಗೂ ಖಚಿತಪಟ್ಟಿಲ್ಲ.

ನಾಳೆ ಹಾಸನದಲ್ಲಿ ಜಿಲ್ಲಾ ಬಿಜೆಪಿ ಘಟಕವು ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ.ನಂತರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ.


Spread the love

About Laxminews 24x7

Check Also

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

Spread the loveಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ